ಅಂಚೆ ಮತಗಳ ಮರು ಎಣಿಕೆ ವಿವಾದ: ಕ್ರಿಮಿನಲ್ ಪ್ರಕರಣ ರದ್ದತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಡಿ ಎನ್ ಜೀವರಾಜ್
ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆಲುವು ಸಾಧಿಸಿದ ಬೆನ್ನಿಗೇ ಮತಗಳನ್ನು ತಿರುಚಿದ ಆರೋಪದ ಕುರಿತು ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದತಿ ಕೋರಿ ಬಿಜೆಪಿಯ ಶೃಂಗೇರಿ ಶಾಸಕ ಡಿ ಎನ್ ಜೀವರಾಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ವಿ ಶ್ರೀಶಾನಂದ ಅವರ ರಜಾಕಾಲದ ಏಕಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ನಿಗದಿಯಾಗಿದೆ.
2023ರ ಮೇ 13ರಂದು ಮತ ಎಣಿಕೆ ಮುಗಿದ ಬಳಿಕ ದೇವರಾಜ್, ಹಿಂದಿನ ಚುನಾವಣಾಧಿಕಾರಿ ವೇದಮೂರ್ತಿ ಮತ್ತು ಚಿಕ್ಕಮಗಳೂರಿನ ಅಂದಿನ ಜಿಲ್ಲಾಧಿಕಾರಿ ರಮೇಶ್ ಅವರು ಸಂಚು ರೂಪಿಸಿ ಮತ ಪೆಟ್ಟಿಗೆಗಳ ಸೀಲು ತೆಗೆದು ರಾಜೇಗೌಡರಿಗೆ ಬಿದ್ದಿದ್ದ ಒಂದು ಕಟ್ಟಿನ 170 ಮತಗಳನ್ನು ತಿದ್ದುಪಡಿ ಮಾಡಿದ್ದಾರೆ. ಈ ವಿಚಾರವನ್ನು 2026ರ ಮೇ 2ರಂದು ಮತ ಮರು ಎಣಿಕೆ ಆರಂಭಿಸುವುದಕ್ಕೂ ಮುನ್ನವೇ ಪ್ರಸ್ತಾಪಿಸಿ 2026ರ ಮೇ 3ರಂದು ಕಾಂಗ್ರೆಸ್ನ ಮತ ಎಣಿಕೆಯಲ್ಲಿ भागಿಯಾಗಿದ್ದ ಏಜೆಂಟ್ ಸುಧೀರ್ ಕುಮಾರ್ ಮುರೋಳ್ಳಿ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ಇದರ ಅನ್ವಯ ಆರೋಪಿಗಳ ವಿರುದ್ಧಐಪಿಸಿ ಸೆಕ್ಷನ್ಗಳಾದ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120B (ಪಿತೂರಿ), and 149 (ಸಮಾನ ಉದ್ದೇಶ) ಜೊತೆಗೆ ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 136ರ (ಚುನಾವಣಾ ಅಕ್ರಮ) ಅಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನು ದೇವರಾಜ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ನ ಟಿ ಡಿ ರಾಜೇಗೌಡರ ಆಯ್ಕೆ ಪ್ರಶ್ನಿಸಿ ಜೀವರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ 2026ರ ಏಪ್ರಿಲ್ 6ರಂದು ತಿರಸ್ಕೃತವಾಗಿರುವ 279 ಅಂಚೆ ಮತಗಳನ್ನು ಪರಿಶೀಲಿಸಿ ವಿಜೇತರನ್ನು ಘೋಷಿಸುವಂತೆ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ 2026ರ ಮೇ 3ರಂದು ಚುನಾವಣಾಧಿಕಾರ ನ್ಯಾಯಾಲಯದ ನಿರ್ದೇಶನದ ಅನುಸಾರ ಅಂಚೆ ಮತಗಳನ್ನು ಮರು ಎಣಿಕೆ ಮಾಡಿ ಕಾಂಗ್ರೆಸ್ ಟಿ ಡಿ ರಾಜೇಗೌಡ ವಿರುದ್ಧ ಜೀವರಾಜ್ ವಿಜೇತರು ಎಂದು ಫಾರ್ಮ್ 21C ಪತ್ರ ನೀಡಿದ್ದರು. ಇದಕ್ಕೂ ಮುನ್ನ, ಮೂರು ವರ್ಷಗಳ ಕಾಲ ರಾಜೇಗೌಡ ಶಾಸಕರಾಗಿದ್ದರು. 201 ಮತಗಳ ಕೂದಲೆಳೆ ಅಂತರದಲ್ಲಿ ರಾಜೇಗೌಡ ಜಯಭೇರಿ ಬಾರಿಸಿದ್ದರು.
ಹೊಸದಾಗಿ ಮತ ಎಣಿಕೆ ನಡೆದು ತಾನು ವಿಜೇತ ಎಂದು ಘೋಷಿಣೆಯಾದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಇದು ನ್ಯಾಯಾಲಯದ ಆದೇಶವನ್ನು ವಿಫಲಗೊಳಿಸುವ ಪ್ರಯತ್ನವಾಗಿದೆ. ಅಲ್ಲದೇ, ನ್ಯಾಯಾಲಯದ ನಿರ್ದೇಶನದಂತೆ ಮರು ಎಣಿಕೆಯಾದ ತಕ್ಷಣ ವಿಜೇತರನ್ನು ಚುನಾವಣಾಧಿಕಾರಿ ಘೋಷಿಸಿರಲಿಲ್ಲ. ವಾಟ್ಸಾಪ್ ಮೂಲಕ ಲೀಗಲ್ ನೋಟಿಸ್ ಕಳುಹಿಸಿದ ಬಳಿಕ ಜಯ ಘೋಷಿಸಲಾಗಿದೆ. ಸ್ವತಂತ್ರವಾಗಿ ನಿರ್ಧರಿಸಿ ಎಫ್ಐಆರ್ ದಾಖಲಿಸಿಲ್ಲ. ಬದಲಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ಬಳಿಕ ಪ್ರಕರಣ ದಾಖಲಿಸಲಾಗಿದೆ ಎಂದು ಜೀವರಾಜ್ ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.
ತಾಜಾ ಸುದ್ದಿ
ಹೈಕೋರ್ಟ್ ಸುದ್ದಿ
ಅಂಚೆ ಮತಗಳ ಮರು ಎಣಿಕೆ ವಿವಾದ: ಜೀವರಾಜ್ ಸಲ್ಲಿಸಿದ ರಿಟ್ ಅರ್ಜಿ
ಮುಖ್ಯ ಸುದ್ದಿ
ವಿಶೇಷ ನ್ಯಾಯಾಲಯದ ತೀರ್ಪು
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಇದರಿಂದ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು ಎದುರಾಗಿದೆ.
ವಿಶೇಷ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಬುಧವಾರ 17 ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿತ್ತು. ಗುರುವಾರ ಶಿಕ್ಷೆಯ ಪ್ರಮಾಣ ನಿಗದಿಪಡಿಸುವುದಕ್ಕೆ ಸಂಬಂಧಿಸಿದಂತೆ ಸಿಬಿಐ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಹಾಗೂ ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಶ್ಯಾಮಸುಂದರ್, ಇತರೆ ಅಪರಾಧಿಗಳ ಪರ ವಕೀಲರು ಹಾಗೂ ಸ್ವತಃ ಅಪರಾಧಿಗಳ ಮನವಿಯನ್ನು ಆಲಿಸಿದ್ದ ನ್ಯಾಯಾಲಯವು ಇಂದಿಗೆ ತೀರ್ಪು ಕಾಯ್ದಿರಿಸಿತ್ತು.
ವಿಕ್ರಮ್ ಬಳ್ಳಾರಿ (A2), ಕೀರ್ತಿ ಕುಮಾರ್ ಅಲಿಯಾಸ್ ಬಸವರಾಜ್ ಕುರಹಟ್ಟಿ (A3), ಸಂದೀಪ್ ಸವದತ್ತಿ ((A24), ವಿನಾಯಕ್ ಕಟಗಿ (A5), ಮಹಾಬಲೇಶ್ವರ್ ಹೊಂಗಲ್ ಅಲಿಯಾಸ್ mudaka (A6), ಸಂತೋಷ್ ಸವದತ್ತಿ (A7), ಎಂ ದಿನೇಶ್ (A8), ಎಸ್ ಅಶ್ವತ್ (A9), ಕೆ ಎಸ್ ಸುನೀಲ್ (A10), ನಜೀರ್ ಅಹ್ಮದ್ (A11), ಶನ್ವಾಜ್ (A12), ಕೆ ನೂತನ್ (A13), ಸಿ ಹರ್ಷಿತ್ (A14), ವಿನಯ್ ಕುಲಕರ್ಣಿ (A15), ಚಂದ್ರಶೇಖರ್ ಇಂಡಿ ಅಲಿಯಾಸ್ ಚಂದ್ರು ಮಾಮ (A16) ಮತ್ತು ವಿಕಾಸ್ ಕಲಬುರ್ಗಿಗೆ (A18) ಐಪಿಸಿ ಸೆಕ್ಷನ್ 302 ಜೊತೆಗೆ 120-B ಅಪರಾಧಕ್ಕೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
20ನೇ ಆರೋಪಿ ವಾಸುದೇವ ರಾಮ ನಿಲೇಕಣಿ ಮತ್ತು 21ನೇ ಆರೋಪಿ ಸೋಮಶೇಖರ್ ಬಸಪ್ಪ ನ್ಯಾಮಗೌಡ ಅವರಿಗೆ ಅನುಮಾನದ ಲಾಭ ನೀಡಿ ಅವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಲಾಗಿದೆ. ಒಂದನೇ ಆರೋಪಿ ಬಸವರಾಜ್ ಮುತ್ತಗಿ ನೀಡಲಾಗಿದ್ದ ಕ್ಷಮಾದಾನವನ್ನು ಕಾಯಂಗೊಳಿಸಲಾಗಿದೆ. ಅಪ್ರೂವರ್ ಆಗಿ, ಪ್ರತೀಕೂಲ ಸಾಕ್ಷಿಯಾಗಿ ಬದಲಾಗಿದ್ದ 17ನೇ ಆರೋಪಿ ಶಿವಾನಂದ ಬಿರಾದಾರ್ನನ್ನು ಪ್ರಾಸಿಕ್ಯೂಷನ್ಗೆ ಒಳಪಡಿಸಲು ಅಗತ್ಯ ಅನುಮತಿ ಪಡೆಯಲು ಪ್ರಾಸಿಕ್ಯೂಷನ್ಗೆ ಅನುಮತಿಸಲಾಗಿದೆ. ಹೀಗಾಗಿ, ಒಟ್ಟು 21 ಆರೋಪಿಗಳ ಪೈಕಿ ನಾಲ್ವರನ್ನು ಹೊರತುಪಡಿಸಿ ಉಳಿದ 17 ಮಂದಿಗೆ ಶಿಕ್ಷೆಯಾಗಿದೆ.
ಯಾವ ಸೆಕ್ಷನ್ಗೆ ಯಾವ ಶಿಕ್ಷೆ ಮತ್ತು ದಂಡ
ಐಪಿಸಿ ಸೆಕ್ಷನ್ 302 (ಕೊಲೆ) ಜೊತೆಗೆ 120-B (A2 to A16 & A18)- ಜೀವಾವಧಿ ಶಿಕ್ಷೆ ಮತ್ತು ಪ್ರತಿಯೊಬ್ಬರಿಗೂ ₹30,000 ದಂಡ. ಇದನ್ನು ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಮೂರು ತಿಂಗಳು ಜೈಲು ಶಿಕ್ಷೆ.
ಐಪಿಸಿ ಸೆಕ್ಷನ್ 201(ಸಾಕ್ಷ್ಯ ನಾಶ) ಜೊತೆಗೆ 120B ಜೊತೆಗೆ 149 (ಏಕ ಉದ್ದೇಶದಿಂದ ಎಲ್ಲರೂ ಒಗ್ಗೂಡುವುದು) (A2 to A16, A18 & A19- ಚನ್ನಕೇಶವ ಟಿಂಗರಿಕರ್)– ಏಳು ವರ್ಷಗಳ ಕಠಿಣ ಶಿಕ್ಷೆ ಮತ್ತು ತಲಾ ₹30,000 ದಂಡ.
ಐಪಿಸಿ ಸೆಕ್ಷನ್ 218 (ಸರ್ಕಾರಿ ಅಧಿಕಾರಿ ಆರೋಪಿಗಳಿಗೆ ನೆರವಾಗಲು ಸಾಕ್ಷ್ಯ ನಾಶಪಡಿಸುವುದು) ಜೊತೆಗೆ 120-B ಜೊತೆಗೆ 149 (A2 to A16, A18 & A19- ಏಳು ವರ್ಷ ಜೈಲು ಮತ್ತು ತಲಾ ₹20,000 ದಂಡ. ಜುಲ್ಮಾನೆ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿಯಾಗಿ ಜೈಲು ವಾಸ.
ಐಪಿಸಿ ಸೆಕ್ಷನ್ 143 ಜೊತೆಗೆ 120B (A2 to A14 & A18)- ಆರು ತಿಂಗಳ ಸಾಮಾನ್ಯ ಜೈಲು ಶಿಕ್ಷೆ ಮತ್ತು ತಲಾ ₹2,000 ದಂಡ. ಜುಲ್ಮಾನೆ ಪಾವತಿಸಲು ತಪ್ಪಿದಲ್ಲಿ ಒಂದು ತಿಂಗಳು ಸಾಮಾನ್ಯ ಹೆಚ್ಚುವರಿ ಜೈಲು ಶಿಕ್ಷೆ.
ಐಪಿಸಿ ಸೆಕ್ಷನ್ 147 ಜೊತೆಗೆ 120-B (A2 to A14 & A18)- ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಜೊತೆಗೆ ತಲಾ ₹2,000 ಜುಲ್ಮಾನೆ. ದಂಡ ಪಾವತಿಸಲು ವಿಫಲರಾದರೆ ಒಂದು ತಿಂಗಳ ಸಾಮಾನ್ಯ ಜೈಲು ಶಿಕ್ಷೆ.
IPC Section 148 ಜೊತೆಗೆ 120-B (A2 to A14 & A18)- ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಜೊತೆಗೆ ತಲಾ ₹2,000 ಜುಲ್ಮಾನೆ. ದಂಡ ಪಾವತಿಸಲು ವಿಫಲರಾದರೆ ಒಂದು ತಿಂಗಳ ಸಾಮಾನ್ಯ ಜೈಲು ಶಿಕ್ಷೆ.
ಐಪಿಸಿ 120B (A2 to A16 & A18)- ಜೀವಾವಧಿ ಶಿಕ್ಷೆ ಮತ್ತು ತಲಾ ₹30,000 ದಂಡ; ಜುಲ್ಮಾನೆ ಪಾವತಿಸಲು ವಿಫಲರಾದರೆ ಹೆಚ್ಚುವರಿಯಾಗಿ ಮೂರು ತಿಂಗಳು ಜೈಲು ಶಿಕ್ಷೆ.
ಇದೇ ಅಪರಾಧಕ್ಕೆ ಐಪಿಸಿ ಸೆಕ್ಷನ್ 218 ಅಡಿ 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ಗೆ ಏಳು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಜೊತೆಗೆ ₹30,000 ದಂಡ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿಯಾಗಿ ಮೂರು ತಿಂಗಳು ಜೈಲು ವಾಸ ಅನುಭವಿಸಲು ನ್ಯಾಯಾಲಯ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ:
2016ರ ಜೂನ್ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯೋಗೀಶ್ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್120(B) ಜೊತೆಗೆ 302, 217, 201, 143, 147, 148 ಜೊತೆಗೆ 149, ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್ 25 ಜೊತೆಗೆ 3, 5, 8, 29 ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್ 13(2) ಜೊತೆಗೆ 13(1)(d) ಅಡಿ ಆರೋಪ ಪಟ್ಟಿ ಸಲ್ಲಿಸಿತ್ತು.
ಬಸವರಾಜ್, ವಿಕ್ರಮ್, ಕೀರ್ತಿ ಕುಮಾರ್, ಸಂದೀಪ್ ಅಲಿಯಾಸ್ ಸಂದಿ, ವಿನಾಯಕ್, ಮಹಾಬಲೇಶ್ವರ್ ಅಲಿಯಾಸ್ ಮುದಕ, ಸಂತೋಷ್, ಎಂ ದಿನೇಶ್, ಎಸ್ ಅಶ್ವತ್, ಕೆ ಎಸ್ ಸುನೀಲ್, ನಜೀರ್ ಅಹ್ಮದ್, ಶನ್ವಾಜ್, ಕೆ ನೂತನ್, ಸಿ ಹರ್ಷಿತ್, ವಿನಯ್ ಕುಲಕರ್ಣಿ, ಚಂದ್ರಶೇಖರ್ ಇಂಡಿ ಅಲಿಯಾಸ್, ಚಂದ್ರು ಮಾಮ, ಶಿವಾನಂದ ಬಿರಾದಾರ್, ವಿಕಾಸ್ ಕಲಬುರ್ಗಿ, ಚನ್ನಕೇಶವ ಟಿಂಗರಿಕರ್, ವಾಸುದೇವ್ ರಾಮ ನಿಲೇಕಣಿ ಮತ್ತು ಸೋಮಶೇಖರ್ ನ್ಯಾಮಗೌಡ ವಿರುದ್ಧ 26. 05.2023ರಂದು ನ್ಯಾಯಾಲಯವು ಆರೋಪ ನಿಗದಿ ಮಾಡಿತ್ತು.
2020ರ ನವೆಂಬರ್ 5ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. 2021ರ ಆಗಸ್ಟ್ 11ರಂದು ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. 2025ರ ಜೂನ್ 7ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಯುತ್ತಿರುವಾಗ ವಿನಯ್ ಕುಲಕರ್ಣಿ ಅವರು ಸಾಕ್ಷಿಗಳನ್ನು ಸಂಪರ್ಕಿಸಲು ಅಥವಾ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬುದಕ್ಕೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಹೇಳಿ, ಜಾಮೀನು ರದ್ದುಗೊಳಿಸಿತ್ತು.